ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ
ಧಾರವಾಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಬೀದರನಿಂದ ಚಾಮರಾಜ ನಗರ ವರೆಗೆ ನಡೆಯುತ್ತಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.
ಇಲ್ಲಿಯ ಕರ್ನಾಟಕ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗಾತಿ ಬಾರಿಸುವ ಮೂಲಕ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಧಾರವಾಡ ಜಿಲ್ಲೆಯಲ್ಲಿ ಒಟ್ಟು ೫೫ ಕಿ.ಮೀ. ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ೩.೪೦ ಲಕ್ಷ್ಯ ಜನರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ ೭೯ ಸಾವಿರ ಜನರು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆ ಹೆಚ್ಚಿನ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡ ಜಿಲ್ಲೆಗೆ ಪಾತ್ರವಾಗಿದೆ.
ಮಾನವ ಸರಪಳಿ ಧಾರವಾಡ ಜಿಲ್ಲೆ ತೇಗೂರಿನಿಂದ ಪ್ರಾರಂಭವಾಗಿ ಹಳಿಯಾಳದ ಮಾವಿನಕೊಪ್ಪ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್. ಕೋನರೆಡ್ಡಿ, ಪ್ರಸಾದ ಅಬ್ಬಯ್ಯ, ಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕವಿವಿ ಕುಲಪತಿ ಡಾ. ಕೆ.ಬಿ. ಗುಡಸಿ, ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು, ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಇತರರು ಇದ್ದರು.