ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
12:16 PM Jul 14, 2024 IST | Samyukta Karnataka
ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಟ್ರಂಪ್ ಅವರ ಕಿವಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮತ್ತು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುದರು, ಘಟನೆ ನಡೆದ ಕೂಡಲೆ ಪ್ರತಿರೋಧ ವ್ಯಕ್ತಪಡಿಸಿದ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದರು.