ಅರಣ್ಯ ಅಪರಾಧ ತಡೆಯಲು ಗರುಡಾಕ್ಷಿ ಆನ್‌ಲೈನ್
ಬೆಂಗಳೂರು: ಗರುಡಾಕ್ಷಿ ಆನ್‌ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಲಾಯಿತು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ತಂತ್ರಾಂಶ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಕಾರಿಯಾಗಲಿದೆ ಎಂದರು. ಗರುಡಾಕ್ಷಿ ಆನ್ ಲೈನ್ ಎಫ್ಐಆರ್ ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬುತ್ತದೆ. ಸಾವಿರಾರು ಪ್ರಕರಣಗಳು ದಾಖಲಾದರೂ ಎಷ್ಟು ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಲಾಗತ್ತಿದೆ ಎಂದು ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡಲು ಆಗುತ್ತಿರಲಿಲ್ಲ. ಆನ್ ಲೈನ್ ಎಫ್.ಐ.ಆರ್ ವ್ಯವಸ್ಥೆ ಜಾರಿ ಆದ ಮೇಲೆ ಎಷ್ಟು ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಲಾಗಿದೆ, ಇಲ್ಲ ಎಂಬುದು ತಿಳಿಯುತ್ತದೆ. ಇದನ್ನು ಇಲಾಖೆಯ ಅಧಿಕಾರಿಗಳು ತಾವು ಕುಳಿತ ಜಾಗದಿಂದಲೇ ಎಲ್ಲ ವಲಯಗಳ ಅರಣ್ಯ ಅಪರಾಧ ಪ್ರಕರಣಗಳ ಬಗ್ಗೆ ನಿಗಾ ಇಡಬಹುದು ಎಂದರು.