ಆರ್‌ಬಿಐ ಕಚೇರಿ ಸೇರಿದಂತೆ ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆದರಿಕೆಯನ್ನು ರಷ್ಯನ್ ಭಾಷೆಯಲ್ಲಿ ಇಮೇಲ್ ಮೂಲಕ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬೆದರಿಕೆ ಹಾಕಲಾಗಿದೆ. ಅಧಿಕಾರಿಗಳು ಬೆದರಿಕೆಯ ಮೂಲವನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್‌ಬಿಐ ಕಟ್ಟಡದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ: ವಾರದಲ್ಲಿ ಎರಡನೇ ಭಾರಿ ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಬಾಂಬ್ ಪತ್ತೆ ಘಟಕಗಳ ತಂಡಗಳು, ಶ್ವಾನ ದಳಗಳೊಂದಿಗೆ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ, ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30 ಸಾವಿರ ಯುಎಸ್ ಡಾಲರ್ ಬೇಡಿಕೆ ಇಟ್ಟಿದ್ದರು. ಕೂಲಂಕುಷವಾಗಿ ಪರಿಶೀಲನೆ ಮಾಡಿದ ಬಳಿಕ ಸುಳ್ಳು ಬೆದರಿಕೆ ಎಂಬುದು ತಿಳಿದುಬಂದಿತ್ತು.