For the best experience, open
https://m.samyuktakarnataka.in
on your mobile browser.

ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ?

11:23 AM Dec 21, 2024 IST | Samyukta Karnataka
ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ

ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ - ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ?

ಬೆಂಗಳೂರು: ಸಾಹಿತ್ಯ ಸಮ್ಮೇಳನದಲ್ಲಿ ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ. ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ - ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ? ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಆಗ್ರಹಿಸುತ್ತೇನೆ ಎಂದಿದ್ದಾರೆ.

Tags :