ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು
ಕಾರವಾರ: ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು. ನಿಮ್ಮ ನಿಮ್ಮ ಕಾಲದಲ್ಲಿ ಏನೇನು ಆಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಬಾಂಬ್ ಸ್ಫೋಟ ಆಗಲು ಎರಡೂ ಪಕ್ಷದವರು ಕಾರಣ ಇದ್ದೀರಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ನಿಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ. ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಶೂಟ್ ಅಟ್ ಸೈಟ್ ಮಾಡಬೇಕು. ಬಂಧಿಸಿ ಒಳಗಡೆ ಹಾಕಿ, ಆಮೇಲೆ ಜಾಮೀನಿನ ಮೂಲಕ ಹೊರ ಬಂದು ಅದೇ ಕೃತ್ಯ ಮಾಡಲು ಬಿಡಬಾರದು. ಈವರೆಗೆ ದೇಶದ್ರೋಹಿ ಘೋಷಣೆ ಕೂಗಿದವರಿಗೆ ಒಬ್ಬರಿಗೂ ಶಿಕ್ಷೆಯಾಗಿಲ್ಲ, ಅದಕ್ಕೆ ಶೂಟ್ ಮಾಡಿ, ಕೊಂದು ಹಾಕಿ. ಇಂಥ ದೇಶವಿರೋಧಿಗಳು ಈ ನೆಲದಲ್ಲಿ ಬದುಕುವುದಕ್ಕೆ ಅರ್ಹತೆ ಇಲ್ಲ. ಒಮ್ಮೆ ಶೂಟೌಟ್ ಮಾಡಿದರೆ ಆಗ ಪಾಕಿಸ್ತಾನ ಪರ ಘೋಷಣೆ ಕೂಗಬಾರದು ಕೂಗಿದರೆ ಏನಾಗುತ್ತೆಂದು ಗೊತ್ತಾಗುತ್ತೆ. ದೇಶದ್ರೋಹಿ ಚಟುವಟಿಕೆ ಮಾಡಿದವರ ಪರವಾಗಿ ಮಾತನಾಡಿದ, ಮಾತನಾಡುವವರ ಮುಖಂಡರ ಮೇಲೆಯೇ ಎಫ್‌ಐಆರ್ ಹಾಕಬೇಕು ಎಂದು ಅಭಿಪ್ರಾಯ ಪಟ್ಟರು.