ಗಡಿ ವಿವಾದ ಕೆಣಕಿದ ಠಾಕ್ರೆ
05:11 PM Dec 09, 2024 IST | Samyukta Karnataka
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭಗೊಳ್ಳುವ ಸಂದರ್ಭದಲ್ಲೇ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿಯ ಜೊತೆಗೆ ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಗಡಿ ವಿವಾದ ಕೆದಕಿದ್ದಾರೆ. ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಉದ್ದವ್ ಠಾಕ್ರೆ ನೇತೃತ್ವದ ಬಣ ಗಡಿ ವಿಚಾರ ಕೆದಕುವುದು ಹೊಸದೇನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.