For the best experience, open
https://m.samyuktakarnataka.in
on your mobile browser.

ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ

07:25 PM Sep 17, 2024 IST | Samyukta Karnataka
ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ
ಹುಬ್ಬಳ್ಳಿ ಕಾ ರಾಜಾ ಗಣೇಶ ವಿಸರ್ಜನೆ ಭವ್ಯ ಮೆರವಣಿಗೆ ನೋಟ

ಹುಬ್ಬಳ್ಳಿ: ನಮ್ಮ ಸನಾತನ ಸಂಸ್ಕೃತಿ ತಿಳಿಸಿಕೊಡುವ ಕೆಲಸವನ್ನು ಹುಬ್ಬಳ್ಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮಹಾಮಂಡಳ ಹಲವು ವರ್ಷಗಳಿಂದ ಮಾಡುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಇಲ್ಲಿನ ದುರ್ಗದ ಬಯಲಿನಲ್ಲಿ ಮಂಗಳವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮಹಾಮಂಡಳ ಆಯೋಜಿಸಿದ ಸಾರ್ವಜನಿಕ ೧೧ ದಿನಗಳ ಗಣಪತಿ ವಿಗ್ರಹಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧರ್ಮ ಬೆಳವಣಿಗೆ ಕಾರ್ಯ ಹೆಚ್ಚು ಹೆಚ್ಚು ಆಗಬೇಕು. ಪ್ರತಿಷ್ಠಿತ ಬಡಾವಣೆಗಳಲ್ಲಿ ಗಣೇಶೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೆಚ್ಚು ಮಾಡಿದ್ದಾರೆ. ಎಲ್ಲರೂ ಸೇರಿಕೊಂಡು ಹಬ್ಬ ಆಚರಿಸುವ ಸಂದರ್ಭದಲ್ಲಿ ಕಿಡಗೇಡಿತನ ಮಾಡಲು ನಾವು ಬಿಡುವುದಿಲ್ಲ. ಅಂತಹವರ ಮಟ್ಟ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದರು.
ಇಡೀ ಮಹಾಮಂಡಳದ ತಂಡ ಉತ್ತಮ ಕೆಲಸ ಮಾಡುತ್ತಿದೆ. ೧೪ ಇಲಾಖೆಗಳ ಸಭೆ ನಡೆಸಿ ೧೧ ದಿನಗಳವರೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೆ. ರಾತ್ರಿ ಹತ್ತು ಗಂಟೆ ಒಳಗಾಗಿ ಗಣೇಶ ವಿಸರ್ಜನೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಈ ರೀತಿ ಮಾಡುವುದರಿಂದ ಮಕ್ಕಳು ಹಾಗೂ ಮಹಿಳೆಯರು ಗಣೇಶೋತ್ಸವದಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಲಿದೆ ಎಂದರು ಹೇಳಿದರು.