ಗುಂಡಗುತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಂದ ಮತದಾನ
10:36 AM May 07, 2024 IST | Samyukta Karnataka
ಕಲಬುರಗಿ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅವರ ಧರ್ಮಪತ್ನಿ ಶೃತಿ ಖರ್ಗೆ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಚಿತ್ತಾಪುರ ವಿಧಾನಸಭಾ ಮತಕ್ಷೇತ್ರದ ಗುಂಡಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಖರ್ಗೆ ಅವರು, 100% ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಸಚಿವರು ಹೇಳಿದರು.