ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್: ಗ್ಯಾರಂಟಿಗಳಿಂದ ಹೆಚ್ಚು ಅನುಕೂಲ
07:55 PM Dec 14, 2024 IST | Samyukta Karnataka
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕಾರ್ಯಕ್ಕೆ ಮೆಚ್ಚುಗೆ
ಬೆಂಗಳೂರು: ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದಿದ್ದಾರೆ.