For the best experience, open
https://m.samyuktakarnataka.in
on your mobile browser.

ಜಗದೀಶ್ ಕುಮಾರ್ ಗೋವಾದಲ್ಲಿ ಪೊಲೀಸರ ವಶಕ್ಕೆ

11:57 AM Aug 30, 2024 IST | Samyukta Karnataka
ಜಗದೀಶ್ ಕುಮಾರ್ ಗೋವಾದಲ್ಲಿ ಪೊಲೀಸರ ವಶಕ್ಕೆ

ಬೆಂಗಳೂರು: ಪ್ರಕರಣವೊಂದರಲ್ಲಿ ವಾರಂಟ್ ಜಾರಿಯಾದ್ರೂ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್. ಜಗದೀಶ್ ಕುಮಾರ್‌‌ ಗೋವಾದಲ್ಲಿ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ ಎನ್ನಲಾಗಿದೆ.