For the best experience, open
https://m.samyuktakarnataka.in
on your mobile browser.

ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆ

07:38 PM Aug 28, 2024 IST | Samyukta Karnataka
ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಮಂಗಳೂರು: ದೇಶದ್ರೋಹಿ ಹೇಳಿಕೆ ನೀಡಿ ಗೌರವಾನ್ವಿತ ರಾಜ್ಯಪಾಲರನ್ನು ಅವಹೇಳನ ಮಾಡಿದ ಕಾಂಗ್ರೆಸ್ಸಿಗರ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳದ ವ್ಯವಸ್ಥೆಯ ಲೋಪವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ರಸ್ತೆ ತಡೆ ಸಹಿತ ಬೃಹತ್ ಪ್ರತಿಭಟನೆಯು ಪಿವಿಎಸ್ ಸರ್ಕಲ್ ಬಳಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ, ರಾಜ್ಯ ಸರ್ಕಾರ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಪೋಲಿಸ್ ಇಲಾಖೆಯನ್ನು ಬಳಸಿಕೊಂಡು ಬೆದರಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಇಂತಹ ಬೆದರಿಕೆಗಳೆಲ್ಲ ಜಗ್ಗುವ ಮಾತೇ ಇಲ್ಲ. ಐವನ್ ಡಿಸೋಜರಂತಹ ದೇಶ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರನ್ನು ನ್ಯಾಯಾಲಯದ ಕಟಕಟೆಗೆ ತಂದೇ ತರುತ್ತೇವೆ. ಆಗ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯಲ್ಲಿ ಲೋಪ ಎಸಗಿದ್ದು ಸಾಬೀತಾದರೆ ಪೊಲೀಸರನ್ನು ಕಾಪಾಡಲು ಈ ಸರ್ಕಾರ ಬರುವುದಿಲ್ಲ. ಹಾಗಾಗಿ ಪೊಲೀಸರೇ, ನೀವು ನ್ಯಾಯದ ಪರವಾಗಿ ಕಾರ್ಯನಿರ್ವಹಿಸಿ. ಇಂತಹ ದುಷ್ಟ ಹಾಗೂ ಭ್ರಷ್ಟ ಸರಕಾರವನ್ನು ನಂಬಿ ನಿಮ್ಮ ಕರ್ತವ್ಯಕ್ಕೆ ಮೋಸ ಮಾಡಬೇಡಿ ಎಂದು ಎಚ್ಚರಿಸಿದರು.
ನಂತರ ರಸ್ತೆ ತಡೆ ನಡೆಸಿದ ಶಾಸಕರು ಸಂಸದರ ಸಹಿತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಪಾಲಿಕೆ ಸದಸ್ಯರುಗಳ ಸಹಿತ ಅನೇಕ ಬಿಜೆಪಿ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags :