For the best experience, open
https://m.samyuktakarnataka.in
on your mobile browser.

ನಟ ನಾಗಾರ್ಜುನ ಬಿಗ್ ರಿಲೀಫ್

05:33 PM Aug 24, 2024 IST | Samyukta Karnataka
ನಟ ನಾಗಾರ್ಜುನ ಬಿಗ್ ರಿಲೀಫ್

ಹೈದರಾಬಾದ್: ಖ್ಯಾತ ತೆಲುಗು ನಟ ನಾಗಾರ್ಜುನ ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ನಾಗಾರ್ಜುನ ಒಡೆತನದ ಎನ್ ಕನ್ವೆನ್ಷನ್ ಸೆಂಟರ್ ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ, ಬೆಳಗ್ಗೆ ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ನಿಗಾವಣೆ ಹಾಗೂ ರಕ್ಷಣೆ (ಹೈಡ್ರಾ) ಅಧಿಕಾರಿಗಳು, 10 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ವಿಶಾಲವಾದ ಎನ್-ಕನ್ವೆನ್ಷನ್ ಸೆಂಟರ್‌ನ ದಾಖಲೆಗಳನ್ನು ಹಲವು ವರ್ಷಗಳಿಂದ ಪರಿಶೀಲನೆ ನಡೆಸಿದ್ದರು. ಹೈದರಾಬಾದ್ ನಗರದ ಮಾದಾಪುರ ಪ್ರದೇಶದಲ್ಲಿನ ತಮ್ಮಿಡಿಕುಂಟಾ ಕೆರೆಯ ಫುಲ್ ಟ್ಯಾಂಕ್ ಲೆವೆಲ್ (ಎಫ್‌ಟಿಎಲ್) ಪ್ರದೇಶ ಮತ್ತು ಬಫರ್ ಝೋನ್‌ನಲ್ಲಿ ಅಕ್ರಮವಾಗಿ ಕನ್ವೆನ್ಷನ್ ಕೇಂದ್ರ ನಿರ್ಮಾಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿತ್ತು, ನಾಗಾರ್ಜುನ ಒಡೆತನದ ವಿಶಾಲವಾದ ಎನ್- ಕನ್ವೆನ್ಷನ್ ಸೆಂಟರ್ ಅನ್ನು ಕೆಡವಲಾಗುತ್ತಿತ್ತು ಈ ಕುರಿತಂತೆ ನಟ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಯಾವುದೇ ತಪ್ಪನ್ನು ನಾನು ಮಾಡಿಲ್ಲ. ವಿವಾದ ಕೋರ್ಟ್‌ನಲ್ಲಿದ್ದರೂ ತೆರವು ಮಾಡಲಾಗಿದೆ. ನನ್ನ ವಿರುದ್ಧ ಆದೇಶ ಬಂದಿದ್ದರೆ ನಾನೇ ತೆರವು ಮಾಡಿಕೊಳ್ಳುತ್ತಿದ್ದೆ. ಆದರೆ ತೆರವುಗೊಳಿಸಿರುವುದು ಅತೀವ ನೋವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನಾನು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ ಎಂದು ಬರೆದುಕೊಂಡಿದ್ದರು. ನಾಗಾರ್ಜುನ ಒಡೆತನದ ಎನ್ ಕನ್ವೆನ್ಷನ್ ಸೆಂಟರ್ ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹೈದರಾಬಾದ್‌ನ ಮದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ ಕೆಲ ಭಾಗಗಳನ್ನು ಇಂದು ಹೈಡ್ರಾ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Tags :