ಪತ್ನಿ ಆತ್ಮಹತ್ಯೆ, ವಿಷ ಸೇವಿಸಿದ ಪತಿ ಅಸ್ವಸ್ಥ
07:40 PM Dec 15, 2024 IST | Samyukta Karnataka
ಬೆಳಗಾವಿ: ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮ್ಯಾಶ್ರೀ ಎಂದು ಗುರುತಿಸಲಾಗಿದೆ.
ರಮ್ಯಾಶ್ರೀಗೆ ಕಳೆದ ನಾಲ್ಕು ವರ್ಷದ ಹಿಂದೆ ಮೊದಲ ಮದುವೆಯಾಗಿತ್ತು. ಬಳಿಕ ಪತಿಯಿಂದ ದೂರವಾಗಿ ಕಳೆದ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆಯಾಗಿದ್ದಳು.
ಆದರೆ ಅನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗುತ್ತಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಸದ್ಯ ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.