ಪಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ: ಸನ್ಮಾನ
08:01 PM Aug 27, 2024 IST | Samyukta Karnataka
ಕೊಪ್ಪಳ: ಸಮೀಪದ ಭಾಗ್ಯನಗರದ ೯ನೇ ವಾರ್ಡ್ನ ಶ್ರೀಬನ್ನಿಮಹಾಂಕಾಳಿ ದೇವಿ ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷ ತುಕಾರಾಮಪ್ಪ ಗಡಾದ್ ಮತ್ತು ಉಪಾಧ್ಯಕ್ಷ ಹೊನ್ನುರಸಾಬ್ ಬೈರಾಪೂರಗೆ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು, ವಾರ್ಡ್ನ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧರಿದ್ದೇವೆ. ಮೂಲಸೌಕರ್ಯ ಸೇರಿದಂತೆ ಎಲ್ಲ ಕೆಲಸಗಳನ್ನು ಮಾಡುತ್ತೇವೆ. ಅಲ್ಲದೇ ಬನ್ನಿಮಹಾಂಕಾಳಿಗೆ ಬೆಳ್ಳಿಯ ಕಿರೀಟ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.