ಪ್ರಿಯಾಂಕಾ ವಾದ್ರಾ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಪ್ರಿಯಾಂಕಾ ಚುನಾವಣಾ ಗೆಲುವನ್ನು ರದ್ದುಗೊಳಿಸಬೇಕು, ಸೂಕ್ತ ಕ್ರಮ ಕೈಗೊಳ್ಳಬೇಕು
ಕೊಚ್ಚಿ (ಕೇರಳ): ಚುನಾವಾಣಾ ಆಯೋಗಕ್ಕೆ ಪ್ರಿಯಾಂಕಾ ಗಾಂಧಿ ತಮ್ಮ ಆಸ್ತಿ ಕುರಿತಾಗಿ ತಪ್ಪು ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ವಯನಾಡ್‌ನಿಂದ ಸಂಸದೆಯಾಗಿ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ನವ್ಯ ಹರಿದಾಸ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯ ಸಲ್ಲಿಕೆ ಬಗ್ಗೆ ದೃಢಪಡಿಸಿದ ಹರಿದಾಸ್, 2025ರ ಜನವರಿಯಲ್ಲಿ ಈ ಕುರಿತ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಹರಿದಾಸ್ ಪರ ವಕೀಲ ಹರಿಕುಮಾರ್ ಜಿ ನಾಯರ್ ಕೋರ್ಟ್ ನಲ್ಲಿ ವಾದಿಸಲಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮತ್ತು ತಮ್ಮ ಕುಟುಂಬದ ಆಸ್ತಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ, ಹೀಗಾಗಿ ಭಾರತೀಯ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದ್ದು, ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಚುನಾವಣಾ ಗೆಲುವನ್ನು ರದ್ದುಗೊಳಿಸಬೇಕು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹರಿದಾಸ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.