For the best experience, open
https://m.samyuktakarnataka.in
on your mobile browser.

ಬಾಣಂತಿ ಮಹಿಳೆಯರ ಸರಣಿ ಸಾವು: ಎಸ್ಐಟಿ ತನಿಖೆಗೆ ಆಗ್ರಹ

10:27 AM Nov 30, 2024 IST | Samyukta Karnataka
ಬಾಣಂತಿ ಮಹಿಳೆಯರ ಸರಣಿ ಸಾವು  ಎಸ್ಐಟಿ ತನಿಖೆಗೆ ಆಗ್ರಹ

8 ತಿಂಗಳಲ್ಲಿ 28 ಬಾಣಂತಿ ಮಹಿಳೆಯರ ಸಾವು, ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಕಗ್ಗೊಲೆ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ ಗರ್ಭಿಣಿ ಹಾಗು ಬಾಣಂತಿ ಮಹಿಳೆಯರ ಸಾವಾಗುತ್ತಿರುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ಮಹಿಳೆಯರ ಕಗ್ಗೊಲೆ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ, ಸಂಪುಟ ಪುನಾರಚನೆ ಎಂದು ರಾಜಕೀಯದಾಳ ಎಸೆಯುವಲ್ಲಿ ತಾವು ತೋರುತ್ತಿರುವ ಆಸಕ್ತಿಯಲ್ಲಿ ಸ್ವಲ್ಪವಾದರೂ ಆಡಳಿತದಲ್ಲಿ ತೋರಿಸಿ. ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಕುಟುಂಬದ ಮಹಿಳೆಯರಿಗೆ ಜೀವಂತವಾಗಿ ಮನೆಗೆ ಹೋಗುವ ಗ್ಯಾರೆಂಟಿ ಕೊಡಿ. ತಾಯಿ-ಮಗೂ ಸುರಕ್ಷಿತವಾಗಿ ಮನೆ ಸೇರುವ ಗ್ಯಾರೆಂಟಿ ಕೊಡಿ. ಆರೋಗ್ಯ ಸಚಿವ ದಿನೇಶ ಗುಂಡುರಾವ್‌, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್‌ ಹಾಗು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಅವರನ್ನ ಕೂಡಲೇ ಸಂಪುಟದಿಂದ ವಜಾ ಮಾಡಿ. ಬಾಣಂತಿ ಮಹಿಳೆಯರ ಸರಣಿ ಸಾವಿನ ಬಗ್ಗೆ ತಜ್ಞ ವೈದ್ಯರ ತನಿಖಾ ತಂಡ ನೀಡಿರುವ ವರದಿಯನ್ನ ಬಹಿರಂಗ ಮಾಡಿ ಈ ಪ್ರಕರಣವನ್ನ ಎಸ್ಐಟಿ ತನಿಖೆಗೆ ಒಪ್ಪಿಸಿ ಎಂದಿದ್ದಾರೆ.

Tags :