For the best experience, open
https://m.samyuktakarnataka.in
on your mobile browser.

ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ…

01:55 PM Dec 15, 2024 IST | Samyukta Karnataka
ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ…

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಕೊಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, "ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಗಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ" ಎಂದು ತಿಳಿಸಿದ್ದಾರೆ.
"ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ತಿಳಿಸಬಯಸುತ್ತೇನೆ" ಎಂದು ಪರೋಕ್ಷವಾಗಿ ಸಭೆ, ಸಮಾರಂಭಗಳನ್ನು ನಡೆಸಬಾರದು ಎಂದು ಸೂಚನೆ ನೀಡಿದ್ದಾರೆ.