ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ
07:53 PM Sep 18, 2024 IST | Samyukta Karnataka
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ ೧೭ ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿ ಸ್ಥಾನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ ೫೮ರ ಮನಪಾ ಸದಸ್ಯರಾಗಿರುವ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಕ್ಷದಿಂದ ಆಯ್ಕೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಚೇರಿಯಲ್ಲಿ ಸಭೆಯಲ್ಲಿ ನಡೆಯಿತು ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದರು.