ಮಹಿಳೆಯರಿಗೆ ತಿಂಗಳಿಗೆ ₹2,500 ಗ್ಯಾರಂಟಿ ಘೋಷಿಸಿದ ಡಿಕೆಶಿ
'ಪ್ಯಾರಿ ದೀದಿ' ಯೋಜನೆ ಜಾರಿ ಮಾಡಲಿದ್ದು, ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುತ್ತೇವೆ
ನವದೆಹಲಿ: ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುವ ಗ್ಯಾರಂಟಿಯನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೀಡಿದ್ದಾರೆ
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ರಂಗೇರುತ್ತಿದೆ. ದೆಹಲಿ ವಿಧಾನಸಬಾ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಿಸಿದ್ದು ಇಂದು ನಡೆದ ಪತ್ರಿಕೋಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 'ಪ್ಯಾರಿ ದೀದಿ' ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ದಿಲ್ಲಿಯಲ್ಲೂ ಕೂಡ ಅದೇ ರೀತಿ ಇತಿಹಾಸ ಸೃಷ್ಟಿಸುತ್ತೇವೆ ಎಂದರು.
70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 47 ಅಭ್ಯರ್ಥಿಗಳನ್ನೊಳಗೊಂಡ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. AAP ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.