ಮಾಜಿ ಪ್ರಧಾನಿ ಮನಮೋಹನ್ ಸಿಂಗ್: ಅಂತಿಮ ನಮನ ಸಲ್ಲಿಸಿದ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು. ಅವರ ಕುಟುಂಬಕ್ಕೆ ಸಾತ್ವಾಂನ ಹೇಳಿದರು.
ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಹಾಜರಿದ್ದರು. 92 ವಯಸ್ಸಿನ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ 9:15ರ ಹೊತ್ತಿಗೆ ನಿಧನರಾದರು. ಸಿಂಗ್ ಅವರಿಗೆ ಪತ್ನಿ ಗುರುಶರಣ್ ಕೌರ್ ಕೊಹ್ಲಿ ಮತ್ತು ಉಪಿಂದರ್ ಸಿಂಗ್, ಅಮೃತ್ ಸಿಂಗ್, ದಮನ್ ಸಿಂಗ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ.
ನಾಳೆ ದೆಹಲಿಯ ರಾಜ್ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಹಿತಿ ದೊರೆತಿದೆ.