For the best experience, open
https://m.samyuktakarnataka.in
on your mobile browser.

ಮಾಜಿ ಸಿಎಂ ಹಲ್ಲೆಗೆ ಯತ್ನ

07:58 PM Nov 30, 2024 IST | Samyukta Karnataka
ಮಾಜಿ ಸಿಎಂ ಹಲ್ಲೆಗೆ ಯತ್ನ

ದೆಹಲಿ: ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾದಯಾತ್ರೆ ವೇಳೆ ವ್ಯಕ್ತಿಯೊಬ್ಬರು ಹಲ್ಲೆಗೆ ಯತ್ನ ಮಾಡಿದ ಘಟನೆ ನಡೆದಿದೆ.
ಹಲ್ಲೆಗೆ ಯತ್ನ ನಡೆಸುತ್ತಿದ್ದಂತೆ ಭದ್ರತಾ ಸಿಬ್ಬಂದಿ ಮತ್ತು ಕೇಜ್ರಿವಾಲ್ ಅವರ ಬೆಂಬಲಿಗರು ಆ ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರ ನೆರೆಹೊರೆಯಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ ಇನ್ನು ಆ ವ್ಯಕ್ತಿಯನ್ನು ಅಶೋಕ್ ಝಾ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.

Tags :