For the best experience, open
https://m.samyuktakarnataka.in
on your mobile browser.

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

08:49 PM Mar 11, 2024 IST | Samyukta Karnataka
ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

ಕಾರವಾರ: ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಂಸದ ಅನಂತ ಕುಮಾರ ಹೆಗಡೆ ಇಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ಮೂಲಕ ಮಾಧ್ಯಮದ ಮೇಲೆ ಕಿಡಿಕಾರಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಿಲ್ಲೂರಿನಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನೀವು ಯಾವುದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್‌ನಲ್ಲಿ ಏನೇನೋ ಹೇಳಿದರು ಎಂದು ವಿಚಲಿತರಾಗಬಾರದು ಎಂದಿದ್ದಾರೆ.
ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ’’, “ಆನೆ ನಡಿತಾ ಇದ್ರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡೊಕೆ ಆಗಲ್ಲ ಅಂತ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.