ಮುರುಘಾ ಶ್ರೀ ಬಿಡುಗಡೆಗೆ ಆದೇಶ
02:01 PM Oct 07, 2024 IST | Samyukta Karnataka
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ.
ಮುರುಘಾಮಠದ ಶ್ರೀ ಶಿವಮೂರ್ತಿ ಶರಣರ ವಿರುದ್ಧ ಫೋಕ್ಸೋ ಪ್ರಕರಣವನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ 12 ಮಂದಿ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಮುರುಘಾ ಶರಣರನ್ನು ಚಿತ್ರದುರ್ಗ ಜೈಲಿನಲ್ಲಿರಿಸಲಾಗಿತ್ತು. ಒಮ್ಮೆ ಬೇಲ್ ಪಡೆದು ಹೊರ ಬಂದಿದ್ದರು. ಮತ್ತೆ ಅವರನ್ನು ಎರಡನೇ ಬಾರಿಗೆ ಜೈಲು ಸೇರಿದ್ದರು. ಇದೀಗ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆಗೆ ಆದೇಶ ಹೊರಡಿಸಿದೆ.