ಯುವತಿಗೆ ಲೈಂಗಿಕ ಕಿರುಕುಳ: ಓರ್ವ ಆರೋಪಿ ಬಂಧನ
ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಯ್ಯಪ್ಪನಗರ ಸಮೀಪದ ಯುವತಿಯ ಮನೆಯ ಬದಿಯಿಂದ ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ತಂಡವೊಂದು ಅಮಲು ಪದಾರ್ಥ ನೀಡಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿ ಆಕೆಯನ್ನು ವಾಹನದಲ್ಲಿ ಕರೆತಂದು ಮನೆಯ ಬಳಿ ಬಿಟ್ಟು ಹೋಗಿದ್ದು ತೀವ್ರ ಅಸ್ವಸ್ಥರಾಗಿದ್ದ ಯುವತಿಯನ್ನು ವಿಚಾರಿಸಿದಾಗ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ತಿಳಿದಿದೆ ನಡೆಯಲಾಗದ ಪರಿಸ್ಥಿತಿಯಲ್ಲಿ ಇದ್ದ ಯುವತಿಯು ಕಾರ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಯುವತಿಯನ್ನು ಕರೆದೊಯ್ದ ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಎಂಬವನನ್ನು ಪೊಲೀಸರು ಬಂದಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಇತರ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ
ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಸ್ಟೇಷನ್ ಬಳಿ ಜಮಾಯಿಸಿದ್ದು ಉಳಿದ ಆರೋಪಿಗಳನ್ನು ನಾಳೆ ಸಂಜೆಯೊಳಗೆ ಬಂದಿಸದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.