ರಸ್ತೆ ಮಧ್ಯೆ ಹೊತ್ತಿ ಉರಿದ BMW ಕಾರು
03:14 PM Sep 28, 2024 IST | Samyukta Karnataka
ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಚಲಿಸುತ್ತಿದ್ದ BMW ಕಾರು ಒಂದು ಹೊತ್ತಿ ಉರಿದ ಘಟನೆ ನಡೆದಿದೆ.
ಕೂಡಲೇ ಸ್ಥಳೀಯರು ಕಾರಿನ ಬೆಂಕಿಯನ್ನು ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.