ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಶುರುವಾಗಲಿದೆ. ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದೆ. ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಇದರಿಂದ ಮತ್ತೆ ಮಳೆ ಶುರುವಾಗಲಿದೆ.
ಫೆಂಗಲ್ ಚಂಡಮಾರುತದ ಪ್ರಭಾವ ಕಡಿಮೆಯಾಗು ತ್ತಿದ್ದಂತೆಯೇ ಹಿಂದೂಮಹಾಸಾಗರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಇದರಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಡಿಸೆಂಬರ್ ೧೩ ಹಾಗೂ ೧೪ರಂದು ೨೧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಡಿಸೆಂಬರ್ ೧೫ರವರೆಗೂ ಮಳೆ ಮುಂದುವರೆಯಲಿದೆ ನಂತರ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.