For the best experience, open
https://m.samyuktakarnataka.in
on your mobile browser.

ರೈತರ ಜಮೀನ ಯಾರ ವಶವೂ ಆಗಲು ಬಿಡುವುದಿಲ್ಲ!

03:46 PM Oct 26, 2024 IST | Samyukta Karnataka
ರೈತರ ಜಮೀನ ಯಾರ ವಶವೂ ಆಗಲು ಬಿಡುವುದಿಲ್ಲ

ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ

ಬೆಂಗಳೂರು: ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು ಪೋಸ್ಟ್‌ ಮಾಡಿದ್ದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು.

ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ ಸಮಿತಿ ಅಥವಾ ಸರ್ಕಾರದ ಇಲಾಖೆಯಿಂದ ಯಾವುದೇ ನೋಟಿಸಗಳು ಬಂದಿಲ್ಲ.

ಈಗಾಗಲೇ ಜಿಲ್ಲೆಯಲ್ಲಿ ಹಲವು ರೈತರಿಗೆ ವಕ್ಫ್ ಆಸ್ತಿ ನೋಟಿಸು ಬಂದಿದೆ ಎಂಬ ದೂರುಗಳಿದ್ದು, ವಕ್ಫ್ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಎಲ್ಲ ದಾಖಲೆಗಳನ್ನು ಕೂಲಕುಂಷವಾಗಿ ಪರಿಶೀಲಿಸುತ್ತಾರೆ. ಒಂದೇ ಒಂದು ಇಂಚು ರೈತರ ಜಾಗವು ಅನಗತ್ಯವಾಗಿ, ಆಧಾರ, ದಾಖಲೆಗಳಿಲ್ಲದೆ ವಕ್ಫ ಆಸ್ತಿ ಎಂದು ಸೇರಿಸಲಾಗುವುದಿಲ್ಲ.

ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಿ, ಎಲ್ಲ ಗೊಂದಲಗಳಿಗೆ ಉತ್ತರ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಾಗಲಿ ಮತ್ತೊಬ್ಬರಾಗಲಿ ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ ಎಂದಿದ್ದಾರೆ.

Tags :