ರೊಚ್ಚಿಗೆದ್ದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಆಕ್ರೋಶ
04:41 PM Dec 19, 2024 IST | Samyukta Karnataka
ಬೆಳಗಾವಿ: ಸಿ.ಟಿ. ರವಿ ವಿರುದ್ಧ ಆಕ್ರೋಶಗೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸುವರ್ಣಸೌಧದ ಮೊಗಸಾಲೆಯಲ್ಲಿ ಹೈಡ್ರಾಮಾ ಮಾಡಿದ್ದಾರೆ.
ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಪದ ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ. ರವಿ ಅವರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಅವರ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹೆಬ್ಬಾಳ್ಕರ್ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ.