For the best experience, open
https://m.samyuktakarnataka.in
on your mobile browser.

ವರ್ಷ ಪೂರೈಸಿ ಉತ್ಸಾಹದಿಂದ ಮೋದಿ ಭೇಟಿಯಾದ ವಿಜಯೇಂದ್ರ

01:36 PM Dec 18, 2024 IST | Samyukta Karnataka
ವರ್ಷ ಪೂರೈಸಿ ಉತ್ಸಾಹದಿಂದ ಮೋದಿ ಭೇಟಿಯಾದ ವಿಜಯೇಂದ್ರ

ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ,

ನವದೆಹಲಿ: ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಬಿ.ವೈ.ವಿಜಯೇಂದ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು. ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದಿದ್ದಾರೆ.

Tags :