For the best experience, open
https://m.samyuktakarnataka.in
on your mobile browser.

ವಾರಣಾಸಿ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಬಳಿ ಬೆಂಕಿ ಅಗ್ನಿ ಅವಘಡ: 200 ವಾಹನಗಳು ಭಸ್ಮ

12:59 PM Nov 30, 2024 IST | Samyukta Karnataka
ವಾರಣಾಸಿ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಬಳಿ ಬೆಂಕಿ ಅಗ್ನಿ ಅವಘಡ  200 ವಾಹನಗಳು ಭಸ್ಮ

ಲಕ್ನೋ: ವಾರಣಾಸಿಯ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಮುಂಜಾನೆ ಈ ಘಟನೆ ಸಂಭವಿಸಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ, . ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ ಘಟನಾ ಸ್ಥಳಕ್ಕೆ ಸುಮಾರು 12 ಅಗ್ನಿಶಾಮಕ ದಳ ವಾಹನಗಳು, ಜೊತೆಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ), ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಮತ್ತು ಸ್ಥಳೀಯ ಪೊಲೀಸ್ ತಂಡ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ತಾಸುಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.