ಶಾಲೆಗಳಿಗೆ ಮಾತ್ರ ರಜೆ
10:33 PM Jan 08, 2025 IST | Samyukta Karnataka
ಧಾರವಾಡ: ಹು-ಧಾ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶ ಹೊರತುಪಡಿಸಿ ಹು-ಧಾ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಎಸ್.ಎಸ್. ಕೆಳದಿಮಠ ಆದೇಶಿಸಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ. ರಜಾ ದಿನವನ್ನು ಸರಿದೂಗಿಸಲು ಮುಂದಿನ ೨ ಶನಿವಾರಗಳಂದು ಪೂರ್ಣಾವಧಿ ಶಾಲೆ ನಡೆಸಬೇಕು ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.
ಆದರೆ, ಜಿಲ್ಲಾಡಳಿತದಿಂದ ಯಾವುದೇ ಅಧಿಕೃತ ಮಾಹಿತಿ ಬಾರದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಕೆ.ಪಿ. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.