ಶಾಸಕ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
05:37 PM Sep 17, 2024 IST | Samyukta Karnataka
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಆಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ ಎಂದು ಹಾಕಿರುವ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದ ಬಗ್ಗೆ ಸಾಮಾಜಿಕ ತಾಣಗಳ ಸಂಸ್ಥೆಗಳಿಂದ ಎಡಿಟ್ ಮಾಡಿದ ಪೋಸ್ಟ್‌ಗಳ ವರದಿ ತರಿಸಿಕೊಂಡು ತನಿಖೆ ಮಾಡಿ ಒಂದು ವರ್ಷದ ಬಳಿಕ ಬೆಂಗಳೂರು ಜನ ಪ್ರತಿನಿಧಿಗಳ ಕೋರ್ಟ್‌ನಲ್ಲಿ ಬೆಳ್ತಂಗಡಿ ಪೊಲೀಸರು ಸೆ. ೧೨ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.