ಸಿಎಂ ಹುದ್ದೆ ರೇಸ್‌ನಲ್ಲಿ ನಾನು ಪ್ರಬಲ ಆಕಾಂಕ್ಷಿ
04:54 PM Jan 07, 2025 IST | Samyukta Karnataka
ಬೀದರ್(ಹುಮನಾಬಾದ್): 2028ರ ವಿಧಾನಸಭೆ ಚುನಾವಣೆ ಬಳಿಕ ಅಸ್ತಿತ್ವಕ್ಕೆ ಬರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಪ್ರಬಲ ಆಕಾಂಕ್ಷಿಯಾಗಿರುತ್ತೇನೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.
ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನನ್ನೊಂದಿಗೆ ಇನ್ನೂ ಹಲವರು ರೇಸ್‌ನಲ್ಲಿ ಇರಬಹುದು. ಆ ಪೈಕಿ ನಾನು ಮುಂಚೂಣಿಯಲ್ಲಿರುತ್ತೇನೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಸಚಿವ ರಾಜಶೇಖರ ಪಾಟೀಲ, ಎಂಎಲ್‌ಸಿಗಳಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮತ್ತಿತರರಿದ್ದರು.