For the best experience, open
https://m.samyuktakarnataka.in
on your mobile browser.

ಸಿ.ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್ ಅಪರಾಧ

03:31 PM Dec 19, 2024 IST | Samyukta Karnataka
ಸಿ ಟಿ ರವಿ ಅಸಭ್ಯ ಪದ ಬಳಕೆ  ಕ್ರಿಮಿನಲ್ ಅಪರಾಧ

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿ.ಟಿ. ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.