ಸಿ.ಟಿ.ರವಿ ಪ್ರಕರಣ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ
07:23 PM Dec 24, 2024 IST | Samyukta Karnataka
ಬೆಂಗಳೂರು: ಎಂಎಲ್ಸಿ ಸಿ.ಟಿ.ರವಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜಭವನದ ಮೆಟ್ಟಿಲೇರಿದೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಶಾಸಕರಾದ ಜನಾರ್ದನರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ಹಾವೇರಿ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್ ಅವರು ರಾಜಭವನದಲ್ಲಿ ಗವರ್ನರ್ ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದರು.