ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವು
05:33 PM Apr 07, 2024 IST | Samyukta Karnataka
ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಮುಂಡಗೋಡದ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಹಜ್ ಯಾತ್ರೆಗೆಂದು ಮಾ. 26ರಂದು ಮಕ್ಕಾ ಮದೀನಾಕ್ಕೆ ತೆರಳಿದ್ದರು. ಆದರೆ, ಏ. 6ರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನು ಫಯಾಜ್ ರೋಣ ಅವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.