For the best experience, open
https://m.samyuktakarnataka.in
on your mobile browser.

ಹಾಡುಹಗಲೇ ದುಷ್ಕರ್ಮಿಗಳಿಂದ ಮನೆ ಬೀಗ ಮುರಿದು ನಗದು ಸೇರಿದಂತೆ ಚಿನ್ನಾಭರಣ ಕಳ್ಳತನ

11:14 AM Dec 25, 2024 IST | Samyukta Karnataka
ಹಾಡುಹಗಲೇ ದುಷ್ಕರ್ಮಿಗಳಿಂದ ಮನೆ ಬೀಗ ಮುರಿದು ನಗದು ಸೇರಿದಂತೆ ಚಿನ್ನಾಭರಣ ಕಳ್ಳತನ

ಮಳವಳ್ಳಿ: ಹಾಡುಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯ ಬೀರುನಲ್ಲಿದ್ದ ನಗದು ಸೇರಿದಂತೆ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ಪಟ್ಟಣದ ಅಶೋಕನಗರದಲ್ಲಿ ನಡೆದಿದೆ.
ಪಟ್ಟಣದ ಅಶೋಕನಗರ ವಾಸಿ ಶ್ರೇಯಸ್ ಎಂಬುವವರ ಮನೆಯಲ್ಲೇ ಕಳ್ಳತನವಾಗಿದ್ದು,
ಮನೆಯವರೆಲ್ಲಾ ಪಕ್ಕದ ಬೀದಿಯಲ್ಲಿ ಮನೆಯಲ್ಲಿ ದೇವರ ಕಾರ್ಯದಲ್ಲಿ ಪಾಲ್ಗೊಂಡು ಸಂದರ್ಭದಲ್ಲಿ ಹೊಂಚು ಹಾಕಿಕೊಂಡು ಕುಳಿತ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳನುಗ್ಗಿ ಬೀರುನಲ್ಲಿದ್ದ 30 ಗ್ರಾಂ ತೂಕದ ಓಲೆ ,ಉಂಗುರ ಸೇರಿದಂತೆ ಚಿನ್ನಾಭರಣದ ಜೊತೆಗೆ 50 ಸಾವಿರ ರೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಳುವಾಗಿರುವ ಚಿನ್ನಾಭರಣದ ಮೌಲ್ಯ ಸುಮಾರು ಎರಡೂವರೆ ಲಕ್ಷ ರೂಗಳ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಶ್ರೇಯಸ್ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.