ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ʻನಾಮಪತ್ರ ವಾಪಸ್ ತಗೋ, ಹಿತ ಕಾಪಾಡ್ತೇನೆ' ಎಂದ ಆಡಿಯೋ ವೈರಲ್

07:59 PM Apr 25, 2023 IST | Samyukta Karnataka

ವಿ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಚಾಮರಾಜನಗರದಿಂದ ಸ್ಪರ್ಧಿಸುತ್ತಿರುವ ವಿ. ಸೋಮಣ್ಣ ಅಲ್ಲಿನ ಜೆಡಿಎಸ್‌ ಅಭ್ಯರ್ಥಿ ಮಲ್ಲಿಕಾರ್ಜುನ್ ಜೊತೆ ಫಿಕ್ಸಿಂಗ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಇದೀಗ ಆಡಿಯೋ ವೈರಲ್ ಆಗಿದೆ.
ಜೆಡಿಎಸ್ ಅಭ್ಯರ್ಥಿಗೆ ನಾಮಪತ್ರ ವಾಪಸ್ ಪಡೆಯುವಂತೆ ಸೋಮಣ್ಣ ಒತ್ತಾಯಿಸಿದ್ದಾರೆ ಎನ್ನಲಾದ ಆಡಿಯೋದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಿನಗೆ ಗೂಟದ ಕಾರು ಕೋಡ್ತೀವಿ. ಮೊದಲು ವಾಪಸ್ ತಗೋ ಅಂತ ಹೇಳಿದ್ದಾರೆ. ಇನ್ನು ಮುಂದುವರಿದು, ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತ್ತಿದ್ದೀಯಾ? ಮೊದಲು ತೆಗಿ, ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ' ಅಂತ ಆಡಿಯೋದಲ್ಲಿ ಹೇಳಲಾಗಿದೆ. ಇನ್ನು ಸೋಮಣ್ಣ ಅವರೇ ಕರೆ ಮಾಡಿದ್ದರು ಎನ್ನುವುದನ್ನು ಆಲೂರು ಮಲ್ಲು ದೃಢಪಡಿಸಿದ್ದಾರೆ. ಎಂಬ ಆಡಿಯೋ ತುಣುಕು ವಾಟ್ಸ್ ಆ್ಯಪ್ ನಲ್ಲಿ ವೈರಲ್ ಆಗಿದೆ.

Next Article