ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ʼಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣ ಮರುತನಿಖೆʼ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06:57 PM Jan 04, 2024 IST | Samyukta Karnataka

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.
2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು.
2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.
ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು.
ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

Next Article