ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಶಿಖರ್ ಧವನ್
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
13 ವರ್ಷಗಳ ಸುದೀರ್ಘ ವೃತ್ತಿ ಜೀವನಕ್ಕೆ ಅಂತ್ಯ ಹಾಡಿರುವ ಶಿಖರ್ ಧವನ್ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ “ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯೊಂದಿಗೆ ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ಮುಗಿಸುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!” ಎಂದು ಧವನ್ ಬರೆದುಕೊಂಡಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಸಂದೇಶ ಮೂಲಕ ನಿವೃತ್ತಿಯನ್ನು ಘೋಷಿಸಿದ್ದು ಭಾರತಕ್ಕಾಗಿ ಆಡುವ ಕನಸಿತ್ತು. ನಾನು ಅದನ್ನು ಸಾಧಿಸಿದೆ. ನನ್ನ ಈ ಪ್ರಯಾಣದಲ್ಲಿ ಅನೇಕರು ಸ್ಮರಣೀಯ ಕೊಡುಗೆ ನೀಡಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಮೊದಲನೆಯದಾಗಿ ನನ್ನ ಕುಟುಂಬ. ನನ್ನ ಬಾಲ್ಯದ ತರಬೇತುದಾರ ದಿವಂಗತ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಆಟದ ಮೂಲಭೂತ ಅಂಶಗಳನ್ನು ಕಲಿತಿದ್ದೇನೆʼʼ ಎಂದು ಅವರು ಹೇಳಿದ್ದಾರೆ. ಮುಂದುವರಿದು, ”ನಾನು ಇಷ್ಟು ದೀರ್ಘ ಕಾಲ ಕ್ರಿಕೆಟ್ ಆಡಿದ ನನ್ನ ತಂಡಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಕ್ರಿಕೆಟ್ ತಂಡದ ಮೂಲಕ ನನಗೆ ಮತ್ತೊಂದು ಕುಟುಂಬ ಸಿಕ್ಕಿತು. ಜತೆಗೆ ಹೆಸರು, ಖ್ಯಾತಿ ಮತ್ತು ಅಭಿಮಾನಿಗಳ ಪ್ರೀತಿಯೂ ಲಭಿಸಿತುʼʼ ಎಂದಿದ್ದಾರೆ.
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂದುವರೆಯಲಿದ್ದಾರೆ. ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿರುವ ಧವನ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.