ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಉದ್ವಿಗ್ನ ಪರಿಸ್ಥಿತಿ

12:32 PM Jan 23, 2024 IST | Samyukta Karnataka

ಕಲಬುರಗಿ: ನಗರ ಹೊರವಲಯದ ಕೋಟನೂರ ಡಿ ಗ್ರಾಮದ ಬಳಿ ಡಾ. ಬಿ.ಆರ್‌ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ರಾಮ‌ಮಂದಿರ ವೃತ್ತ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕವಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅವಮಾನ ಮಾಡಿದ ಕಿಡಿ ಗಡಿಗಳನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು.
ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ರಾಜ್ಯ ಹೆದ್ದಾರಿ ತಡೆದು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ರಸ್ತೆಯ ಪಕ್ಕದಲ್ಲೆ ಅಂಬೇಡ್ಕರ್ ಮೂರ್ತಿ‌ ಇದ್ದು ಕೊರಳಿಗೆ ಪಾದರಕ್ಷೆ ಹಾರವನ್ನು ಹಾಕಿ ಅವಮಾನಿಸಿದ್ದಾರೆ. ಈ ಘಟನೆ ರಾತ್ರಿ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು‌ ಕೂಡಲೇ ಬಂಧಿಸಿ ಶಿಕ್ಷೆ ನೀಡಬೇಕು ಎಂದು ಮುಖಂಡ ದಿನೇಶ್ ದೊಡ್ಡಮನಿ ಹಾಗೂ ಇತರೆ ದಲಿತ ಮುಖಂಡರ ನೇತೃತ್ವದಲ್ಲಿ ‌ಪ್ರತಿಭಟನೆ ಮಾಡಲಾಗುತ್ತಿದೆ. ಸ್ಥಳಕ್ಕೆ ನಗರ ಡಿಸಿಪಿ ಸಿಕ್ರಿವಾಲ್ ಸೇರಿದಂತೆ ಪೋಲೀಸರು ಆಗಮಿಸಿದ್ದಾರೆ. ಪರಿಸ್ಥಿತಿ ಬಿಗುವಿನಿಂದ‌ ಕೂಡಿದೆ. ಜೇವರ್ಗಿ ಸೇರಿದಂತೆ ಇತರೆ ಜಿಲ್ಲೆಗಳ ಸಂಪರ್ಕ ಕಲ್ಪಿಸುವ ಬೀದರ್ - ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಮಾಡಲಾಗುತ್ತಿದೆ. ಪೊಲೀಸರು‌ ಬಂದ ಬಳಿಕೆ ತುಸು ಸಡಿಲಿಕೆ ಮಾಡಲಾಗಿದೆ. ಆದರೆ, ಕಿಡಿಗೇಡಿಗಳ ಬಂಧನ ಕೂಡಲೇ ಮಾಡಬೇಕು. ಅಲ್ಲಿಯವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಮುಖಂಡರು‌ ತಿಳಿಸಿದ್ದಾರೆ.

Next Article