For the best experience, open
https://m.samyuktakarnataka.in
on your mobile browser.

ಅಗಲಿದ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದ ಯಶ್

02:04 PM Jan 17, 2024 IST | Samyukta Karnataka
ಅಗಲಿದ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ  ಪರಿಹಾರದ ಚೆಕ್​ ವಿತರಿಸಿದ ಯಶ್

ಗದಗ: ನಟ ಯಶ್​ ಅವರ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟ ಅಭಿಮಾನಿಗಳ ಕುಟುಂಬದವರಿಗೆ ನಟ ಯಶ್ ಪರಿಹಾರ ನೀಡಿದ್ದು, ಈ ಚೆಕ್ ಅನ್ನು​ ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಿದ್ದಾರೆ.
ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟ ಯಶ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ತಗುಲಿದ್ದರಿಂದ ಮುರಳಿ, ನವೀನ್​ ಮತ್ತು ಹನುಮಂತ ಮೃತಪಟ್ಟಿದ್ದರು. ಅಭಿಮಾನಿಗಳ ಸಾವಿನ ಸುದ್ದಿ ತಿಳಿದು ಯಶ್​ ಅವರು ಕಂಬನಿ ಮಿಡಿದರು. ಮರುದಿನ ಅವರು ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮೃತರ ಮನೆಗಳಿಗೆ ತೆರಳಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಅವರಿಗೆ ಪರಿಹಾರ ಹಣದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ ತಿಳಿಸಿದ್ದರು. ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ಅವರು ಇಂದು ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ. ಮನೆ ಮಕ್ಕಳನ್ನು ಕಳೆದುಕೊಂಡಿರುವ ಮೂರು ಕುಟುಂಬಗಳಿಗೆ ಸಾಂತ್ವನ ಹೇಳಿ, ಪರಿಹಾರ ಹಣದ ಚೆಕ್ ವಿತರಿಸಿದ್ದಾರೆ. ಪರಿಹಾರದ ಧನವಾಗಿ 5 ಲಕ್ಷ ರೂ. ನೀಡಿದ್ದಾರೆ.