ಅಟಲ್ ಟಿಂಕರಿಂಗ್ ಲ್ಯಾಬ್ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚೈತನ್ಯ
ಕುಸಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯೂ ಒಂದು. 2019 ರಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ನಿರ್ಮಾಣ
ಧಾರವಾಡ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಅಟಲ್ ಟಿಂಕರಿಂಗ್ ಲ್ಯಾಬ್ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚೈತನ್ಯವನ್ನು ತುಂಬಿದ್ದು ವಿದ್ಯಾರ್ಥಿಗಳ ಕಲಿಕೆಯಲ್ಲಿ ಸೃಜನಶೀಲತೆ, ಕಲ್ಪನೆ, ಮತ್ತು ಕುತೂಹಲಗಳನ್ನು ಒಳಗೂಡಿಸಿಕೊಳ್ಳಲು ಸಹಾಯಕವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ದೇಶದ ಅದೆಷ್ಟೋ ಯಶೋಗಾಥೆಗಳಲ್ಲಿ ನಮ್ಮ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯೂ ಒಂದು. 2019 ರಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ಕುಸುಗಲ್ ನ ಅಟಲ್ ಟಿಂಕರಿಂಗ್ ಲ್ಯಾಬ್ ನಿರ್ಮಾಣವಾಗಿದ್ದು, ಈ ಪ್ರಯೋಗಾಲಯವು ಶಾಲಾ ಶಿಕ್ಷಣ ವ್ಯವಸ್ಥೆಯೊಳಗೆ ಮಕ್ಕಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಗಳನ್ನು ಒದಗಿಸುತ್ತದೆ. ಈ ಕಾರ್ಯಕ್ರಮದಲ್ಲಿ ಧ್ವನಿ ನಿಯಂತ್ರಿತ ರೊಬೋಟ್, ಡ್ರೋನ್ ಡೆಮೋಗಳು ಮತ್ತು ಸ್ಮಾರ್ಟ್ ನೀರಾವರಿ ಚಟುವಟಿಕೆಗಳನ್ನು ಒಳಗೊಂಡಿವೆ ಎಂದಿದ್ದಾರೆ.