ಅತಿ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್
ಗದಗ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗಾಗಿ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ ಎಲ್ಲರನ್ನೂ ಒಂದುಗೂಡಿಸಿ ಮುನ್ನಡೆಯುವುದು ಸುಲಭವಾದ ಮಾತಲ್ಲ ಆದರೆ, ನರೇಂದ್ರ ಮೋದಿ ಅವರು ದೃಢಸಂಕಲ್ಪದೊಂದಿಗೆ ದಿಟ್ಟ ಹೆಜ್ಜೆನಿಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ರವಿವಾರ ಭಾರತೀಯ ಜನತಾ ಪಕ್ಷದ ವತಿಯಿಂದ ಗದಗ ಮತಕ್ಷೇತ್ರದ ಜನತೆಗೆ ಹಾಗೂ ಕಾರ್ಯಕರ್ತರಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷವು 2014, 2019, 2024 ರ ಲೋಕಸಭೆ ಚುನಾವಣೆ ಸೇರಿದಂತೆ ಮೂರೂ ಚುನಾವಣೆಯಲ್ಲಿ ಗೆಲುವಿನ ಸ್ಥಾನ ಕೂಡಿಸಿದರೆ ಈ ಬಾರಿ ಬಿಜೆಪಿ ಗೆದ್ದಿರುವ ಸ್ಥಾನಗಳಿಗೂ ಸಮನಾಗಿಲ್ಲ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನಗಳನ್ನು ಕಡಿಮೆ ಮಾಡಿಕೊಳ್ಳುತ್ತಾ ಬರುತ್ತಿದೆ. ಸದ್ಯದ ಅವರ ಪರಿಸ್ಥಿತಿ ಹೇಗಿದೆ ಎಂದರೆ. ಪಕ್ಕದ ಮನೆಯವರಿಗೆ ಮಗು ಹುಟ್ಟಿದರೆ ಇವರು ಸಿಹಿ ಹಂಚಿ ಸಂತಸ ಪಡುತ್ತಿದ್ದಾರೆ ಎಂದು ವ್ಯಂಗವಾಡಿದರು.
ಅತಿ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್
ಭಾರತದ ಸಂವಿಧಾನವನ್ನು ಅತಿ ಹೆಚ್ಚು ಬಾರಿ ತಿದ್ದುಪಡಿ ಮಾಡಿರುವುದು ಕಾಂಗ್ರೆಸ ಪಕ್ಷವಾಗಿದೆ, ವಿಚ್ಚೇಧನದ ನಂತರ ಒಬ್ಬ ಬಡ ಮುಸ್ಲಿಂ ಮಹಿಳೆಯರಿಗೆ ಸಿಗುವ ಜೀವನಾಂಶ ನೀಡುವ ಕೋರ್ಟ್ ಆದೇಶವನ್ನು ರದ್ದು ಮಾಡಲು ದೇಶದ ಸಂವಿಧಾನವನ್ನೇ ತಿದ್ದಿ ನ್ಯಾಯಾಲಯದ ಆದೇಶವನ್ನೆ ತಿರುಚಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಮೀಸಲಾತಿಯನ್ನು ಹೆಚ್ಚಿಸಿರುವುದು ಬಿಜೆಪಿ ಪಕ್ಷ ಈ ಪಕ್ಷ ಹೇಗೆ ಮೀಸಲಾತಿ ಕಸಿದುಕೊಳ್ಳಲು ಸಾಧ್ಯ, ಸಂವಿದಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಬಿಜೆಪಿ ಹೆಚ್ಚಿಸಿ ಆ ವರ್ಗದ ಜನರ ಹಿತ ಕಾಪಾಡಿದೆ ಈಗ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿ ಬೆಲೆ ಏರಿಕೆ ಮಾಡುವ ಮೂಲಕ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುತ್ತಿದೆ. ಪೆಟ್ರೋಲ್, ಡಿಸೇಲ್, ಬಟ್ಟೆ, ದಿನಸಿ ವಸ್ತುಗಳು ಸೇರಿದಂತೆ ಎಲ್ಲವನ್ನು ಹೆಚ್ಚಿಸಿ ಬಡವರ ಮೇಲೆ ಹೊರೆ ಹಾಕಿದ್ದಾರೆ. ರಾಜ್ಯದಲ್ಲಿ ಬೀಕರ ಬರಗಾಲ ಇದ್ದರೂ ರೈತರಿಗೆ ಪರಿಹಾರ ನೀಡಲಿಲ್ಲ. ಇದರಿಂದ ರೈತರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಬೇಕಾಯಿತು. ಹಿಂದೆ ಯಡಿಯೂರಪ್ಪ ಸಿಎಂ ಇದ್ದಾಗ ಸೂರು ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ನೀಡಿದ್ದರು ಎಂದು ಹೇಳಿದರು.