ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ: ಧಾರವಾಡ DC ದಿವ್ಯ ಪ್ರಭುಗೆ ಪ್ರದಾನ

12:34 PM Sep 27, 2024 IST | Samyukta Karnataka

ಬೆಂಗಳೂರು : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು.

ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ ಫಲಾನುಭವಿಗಳೀಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಭಾದಿತ ಪ್ರದೇಶಗಳ ಪುನಃಶ್ಚೇತನಕ್ಕೆ ಅವರು ಹೆಚ್ಚಿನ ಒತ್ತು ನೀಡಿದ್ದರು. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ ಅವರಿಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ವಿ ಮಹೇಶ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

Next Article