For the best experience, open
https://m.samyuktakarnataka.in
on your mobile browser.

‘ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣʼ ಪ್ರಶಸ್ತಿಗೆ ಕುತ್ಲೂರು ಆಯ್ಕೆ

05:49 PM Sep 25, 2024 IST | Samyukta Karnataka
‘ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣʼ ಪ್ರಶಸ್ತಿಗೆ ಕುತ್ಲೂರು ಆಯ್ಕೆ

ಮಂಗಳೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರತಿ ವರ್ಷ ನಡೆಯುವ "ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ‘ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣʼ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.
ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್-೨೦೨೪ ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾಪಂ ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್ ಹಾಗೂ ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ಇದನ್ನು ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶಾದ್ಯಂತ ನಡೆದ ‘ಅತ್ಯುತ್ತಮ ಪ್ರವಾಸಿ ಹಳ್ಳಿಗಳು’ ಸ್ಪರ್ಧೆಯಲ್ಲಿ ಕುತ್ತೂರು ಗ್ರಾಮ ಆಯ್ಕೆಯಾಗಿದೆ.
ಸೆ. ೨೭ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರ ಮಾಡಿದ್ದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Tags :