For the best experience, open
https://m.samyuktakarnataka.in
on your mobile browser.

ಅಧಿಕಾರದ ದಾಹ ಅತಿಯಾಗಿದೆ

03:35 PM Feb 19, 2024 IST | Samyukta Karnataka
ಅಧಿಕಾರದ ದಾಹ ಅತಿಯಾಗಿದೆ

ಹುಬ್ಬಳ್ಳಿ: ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನ ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಈ ಸರ್ಕಾರ ಅವಮಾನ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಅವರು, ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್‌ನ ತುಷ್ಟೀಕರಣದ ಪರಮಾವಧಿ, ಅಂದು.. ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ ಇಂದು.. ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ.. ಕುವೆಂಪು ಅವರ ಬರಹವನ್ನೇ ಅಳಿಸಿ ಹಾಕಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ. ಶಾಲಾ ಮಕ್ಕಳ ಮನಸ್ಥಿತಿ ಹಾಳು ಮಾಡಿದ ಕೀರ್ತಿ‌ ಕಾಂಗ್ರೆಸ್ ಸರಕಾರಕ್ಕೆ. ಕರ್ನಾಟಕದ ಗೌರವವನ್ನು ಹಾಳು ಮಾಡಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ. ಸಿದ್ದರಾಮಯ್ಯನವರೇ, ಅಧಿಕಾರದ ದಾಹ ಅತಿಯಾಗಿದೆ. ಮಕ್ಕಳ ಮನಸ್ಸನ್ನೇ ಹಾಳು ಮಾಡಲು ಹೊರಟ ನೀವು, ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ತಿದ್ದುಪಡಿ ಮಾಡಿರುವ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಅಲ್ಲಿ ಬಿಜೆಪಿ ಚರ್ಚೆ ಮಾಡಲಿದೆ ಎಂದರು.