For the best experience, open
https://m.samyuktakarnataka.in
on your mobile browser.

ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಬಳಿಕ ಶ್ವೇತಪತ್ರ

12:02 PM Feb 07, 2024 IST | Samyukta Karnataka
ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಬಳಿಕ ಶ್ವೇತಪತ್ರ

ನವದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಜಧಾನಿ ದೆಹಲಿಯಲ್ಲಿ ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ಜಂತರ್ ಮಂತರನ್‌ಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ದೆಹಲಿಯ ಹಲಿಯ ಜಂತರ್​ ಮಂತರ್​​ನಲ್ಲಿ ಆಯೋಜಿಸಲಾಗಿರುವ ಪ್ರತಿಭಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ 100 ರೂಪಾಯಿ ತೆರಿಗೆ ಪಾಲು ಕೊಟ್ಟರೆ, ಕೇವಲ 12-13 ರೂ ಮಾತ್ರ ನೀಡುತ್ತಿದೆ. ಇದು ಬಹಳ ದೊಡ್ಡ ಅನ್ಯಾಯ. ಈ ಅನ್ಯಾಯದ ಬಗ್ಗೆ ಒಂದು ದಿನವೂ ಕೂಡ ಕರ್ನಾಟಕದ 25 ಬಿಜೆಪಿ ಸಂಸದರು ಒಮ್ಮೆ ಕೂಡ ಬಾಯಿ ತೆರೆದಿಲ್ಲ” ಎಂದು ಬಿಜೆಪಿ ಸಂಸದರ ವಿರುದ್ಧ ಹರಿಹಾಯ್ದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ. ಬಜೆಟ್​​​ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ” ಎಂದು ಅವರು ಹೇಳಿದರು.
ಈ ಹೋರಾಟಕ್ಕೆ ದಕ್ಷಿಣದ ರಾಜ್ಯಗಳಾದ ಕೇರಳ, ತಮಿಳುನಾಡು ಕೂಡ ಸಾಥ್ ಕೊಟ್ಟಿದೆ.