ಅಪಘಾತ: ಸ್ಥಳದಲ್ಲೇ ಮೂವರು ಸಾವು, ಮೂವರು ಗಂಭೀರ
09:52 AM Jun 15, 2024 IST
|
Samyukta Karnataka
ಚಿತ್ರದುರ್ಗ: ಕಾರು, ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿ ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಇಂದು ನಡೆದಿದೆ.
ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತದಲ್ಲಿ ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ.
.
Next Article